October 20, 2025

ಮುಸ್ಸಂಜೆ

ಪ್ರಭಾವಶಾಲಿ ಕನ್ನಡ ಸಂಜೆ ದಿನ ಪತ್ರಿಕೆ

ಮನ್ಮುಲ್‌ ನಿರ್ದೇಶಕರ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ:

 

ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಗೆಜ್ಜಲಗೆರೆ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರುಗಳ ಚುನಾವಣೆಯನ್ನು ನಡೆಸಲು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸುವುದಿದ್ದಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ದಿನಾಂಕದಿಂದ 30 ದಿನಗಳ ಒಳಗಾಗಿ (ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ) ಕಚೇರಿಯ ಅವಧಿಯಲ್ಲಿ ಸಲ್ಲಿಸಬಹುದಾಗಿದೆ.

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಗೆಜ್ಜಲಗೆರೆ ಆಡಳಿತ ಕಚೇರಿಯಲ್ಲಿ, ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಎಲ್ಲಾ ತಾಲ್ಲೂಕು ಉಪ ಕಚೇರಿಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪರಿಶೀಲನೆಗೆ ಲಭ್ಯವಿರುತ್ತದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿ ಡಾ.ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.