ಬೆಂಗಳೂರಿನ ಚುಂಚನಘಟ್ಟದಲ್ಲಿ ನಿನ್ನೆ ನಡೆದ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಕುಷ್ಟಗಿ ಪಟ್ಟಣದ ಬಾಲಕಿಯರ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಯ ಕೀರ್ತಿಯನ್ನು ಎತ್ತರಕ್ಕೆ ಏರಿಸಿದ್ದಾರೆ.
ಹುಲಿಗೆಮ್ಮ ಶರಣಪ್ಪ ಕತ್ತಿ 9ನೇ ತರಗತಿಯ ವಿದ್ಯಾರ್ಥಿನಿ ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆ ಯಲ್ಲಿ 3 ನಿಮಿಷ ಎಂಡೋ ರೋನ್ಸ್ ಸ್ಪರ್ಧೆ ಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾಳೆ
ರೇಖಾ ಶರಣಪ್ಪ ವಣಗೇರಿ 9ನೇ ತರಗತಿಯ ವಿದ್ಯಾರ್ಥಿನಿ ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆ ಯಲ್ಲಿ 30 ಸೆಕೆಂಡ್ ಡಬಲ್ ಅಂಡರ್ ಸ್ಪೀಡ್ ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.
ಇದೇ ಇಬ್ಬರು ವಿದ್ಯಾರ್ಥಿನಿಯರು ಜಂಪ್ ರೋಪ್ ಸ್ಪರ್ಧೆ ಯಲ್ಲಿ ಫ್ರಂಟ್ ಟು ಫ್ರಂಟ್ ಸ್ಪರ್ಧೆ ಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಹಾಗೆಯೇ 10ನೇ ತರಗತಿಯ ವಿದ್ಯಾರ್ಥಿನಿ ಶಿವಮ್ಮ ಭರಮಪ್ಪ ಉಪ್ಪಾರ ಇವರು ರಾಜ್ಯಮಟ್ಟದ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ ನಾಲ್ಕನೇ ಸ್ಥಾನ ಪಡೆದು ಸಮಾಧಾನಕರ ಬಹುಮಾನವನ್ನು ಗಳಿಸಿದ್ದಾಳೆ.
ಈ ಮೂವರು ವಿದ್ಯಾರ್ಥಿನಿಯರನ್ನು ಹಾಗೂದೈಹಿಕ ಶಿಕ್ಷಕಿ ವ, ವ್ಯವಸ್ಥಾಪಕಿ ಶ್ರೀಮತಿ ವಿಜಯಲಕ್ಷ್ಮಿ ತುಂಬದ ಹಾಗೂ ನಾಗಪ್ಪ ಬಿಳಿಯಪ್ಪನವರನ್ನು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶ್ರೀ ಸುರೇಂದ್ರ ಕಾಂಬ್ಳೆಯವರು, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಶ್ರೀಮತಿ ಸರಸ್ವತಿ ಇವರು, ಹಾಗೂ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ಜಗದೀಶ ಸೂಡಿ, ಶಾಲೆಯ ಉಪಪ್ರಾಚಾರ್ಯರು ಶ್ರೀ ಶಿವಪ್ಪ ವೈಬಿಯವರೊಂದಿಗೆ ಶಾಲೆಯ ಸಕಲ ಗುರು ಬಳಗ ಅಭಿನಂದಿಸಿದ್ದಾರೆ.
More Stories
ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಯಾರಿಂದಲೂ ಸಾಧ್ಯವಿಲ್ಲ
ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ
ಪೊಲೀಸರ ಹಲ್ಲೆಯನ್ನು ಖಂಡಿಸಿ ಪಂಚಮ ಸಾಲಿ ಸಮುದಾಯ ಪ್ರತಿಭಟನೆಗೆ ನಿರ್ಧಾರ